ಟಿ.ಟಿ: ಸುಜನ್‌ಗೆ ಬೆಳ್ಳಿ ಬೆಂಗಳೂರು: ಕರ್ನಾಟಕದ ಸುಜನ್‌ ಭಾರದ್ವಾಜ್‌ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ರಾಷ್ಟ್ರೀಯ ಟ್ಯಾಲೆಂಟ್‌ ಹಂಟ್‌ ಟೇಬಲ್‌ ಟೆನಿಸ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿಯ ಪದಕ ಜಯಿಸಿದ್ದಾರೆ. 13ರಿಂದ 15 ವರ್ಷದೊಳಗಿನವರ ಸಬ್‌ ಜೂನಿಯರ್ ವಿಭಾಗದಲ್ಲಿ ಅವರಿಂದ ಈ ಸಾಧನೆ ಮೂಡಿಬಂದಿದೆ. ಸಮ್ಯಕ್‌ ಕಶ್ಯಪ್‌ ಅವರು ಕಂಚಿನ ಪದಕ ಪಡೆದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.