ಚೆಸ್‌: ಗುಕೇಶ್‌ಗೆ ಪ್ರಶಸ್ತಿ ಚೆನ್ನೈ : ಭಾರತದ ಕಿರಿಯ ಗ್ರ್ಯಾಂಡ್‌ಮಾಸ್ಟರ್‌ ಡಿ.ಗುಕೇಶ್‌, ಫ್ರಾನ್ಸ್‌ನ ಕಾನ್‌ನಲ್ಲಿ ನಡೆದ ಕಾನ್‌ ಓಪನ್‌ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಶನಿವಾರ ರಾತ್ರಿ ನಡೆದ ಅಂತಿಮ ಸುತ್ತಿನ ಪೈಪೋಟಿಯಲ್ಲಿ ಗುಕೇಶ್‌, ಫ್ರಾನ್ಸ್‌ನ ಹರುಟ್ಯೂನ್‌ ಬರ್ಗ್‌ಸೆಗ್ಯನ್‌ ಅವರನ್ನು ಮಣಿಸಿದರು. ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 7.5ಕ್ಕೆ ಹೆಚ್ಚಿಸಿಕೊಂಡು ಪ್ರಶಸ್ತಿಯ ಸಾಧನೆ ಮಾಡಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.