ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌: ಸೆಮಿಗೆ ಪುಣೆ ಹೈದರಾಬಾದ್‌: ಅಮೋಘ ಆಟ ಮುಂದುವರಿಸಿರುವ ಪುಣೆ 7 ಏಸಸ್‌ ತಂಡದವರು ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ (ಪಿಬಿಎಲ್‌) ಐದನೇ ಆವೃತ್ತಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಸಿ.ಎಂ.ಸಿ.ಬಾಲಯೋಗಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಪುಣೆ ತಂಡ 4–1ಯಿಂದ ಅವಧ್‌ ವಾರಿಯರ್ಸ್‌ ವಿರುದ್ಧ ಗೆದ್ದಿತು. ಮಹಿಳಾ ಸಿಂಗಲ್ಸ್‌ ವಿಭಾಗದ ‘ಟ್ರಂಪ್‌’ ಪಂದ್ಯದಲ್ಲಿ ಪುಣೆ ತಂಡದ ರಿತುಪರ್ಣ ದಾಸ್‌ 15–13, 15–12 ನೇರ ಗೇಮ್‌ಗಳಿಂದ ವಿಶ್ವ ರ‍್ಯಾಂಕಿಂಗ್‌ನಲ್ಲಿ 14ನೇ ಸ್ಥಾನದಲ್ಲಿರುವ ಬಿವೆನ್‌ ಜಾಂಗ್‌ಗೆ ಆಘಾತ ನೀಡಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.