ಅಥ್ಲೆಟಿಕ್ಸ್: ಕುರಿಗಾಹಿಗಳಿಗೆ ಪ್ರಥಮ ಸ್ಥಾನ ಮೊಳಕಾಲ್ಮುರು: ಈಚೆಗೆ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ತಾಲ್ಲೂಕಿನ ಬಿ.ಜಿ.ಹಳ್ಳಿಯ ಹನುಮಂತಪ್ಪ ಹಾಗೂ ಶಿವಲಿಂಗಪ್ಪ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಕುರಿಗಾಹಿ ಹನುಮಂತಪ್ಪ 10 ಕಿ.ಮೀ ಓಟದಲ್ಲಿ ಪ್ರಥಮ ಸ್ಥಾನ, 5 ಕಿ.ಮೀ ಓಟದಲ್ಲಿ ದ್ವಿತೀಯ ಸ್ಥಾನ, 5 ಕಿ.ಮೀ ನಡಿಗೆಯಲ್ಲಿ ದ್ವಿತೀಯ ಸ್ಥಾನ ಹಾಗೂ 400/400 ಮೀ ರಿಲೇನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಿವಲಿಂಗಪ್ಪ ಅವರು 5 ಕಿ.ಮೀ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ‘ಇಂಡಿಯನ್ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆ’ ನೇತೃತ್ವದಲ್ಲಿ ಕೂಟ ಹಮ್ಮಿಕೊಳ್ಳಲಾಗಿತ್ತು. ಕುರಿಗಾಹಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡಲು ಕ್ರೀಡಾ ಪ್ರೇಮಿಗಳು ಸಹಕಾರ ನೀಡಬೇಕು ಎಂದು ಸಂಸ್ಥೆಯು ಮನವಿ ಮಾಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.