: ಸೆಮಿಫೈನಲ್‌ನಲ್ಲಿ ಬಜರಂಗ್‌ಗೆ ಸೋಲು, ಕಂಚಿನ ಆಸೆ ಜೀವಂತ ಚಿಬಾ(ಜಪಾನ್): ಭಾರತದ ಭರವಸೆಯ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ. ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಬಜರಂಗ್, ಮೂರು ಬಾರಿಯ ವಿಶ್ವ ಚಾಂಪಿಯನ್ ಅಜರ್‌ ಬೈಜಾನ್‌ನ ಹಾಜಿ ಅಲಿಯೇವ್ ವಿರುದ್ಧ 5-12ರ ಅಂತರದಲ್ಲಿ ಸೋಲು ಅನುಭವಿಸಿದರು. ಇದನ್ನೂ ಓದಿ:ಮಹಿಳಾ ಹಾಕಿ ಟೀಂಗೆ ಪ್ರಧಾನಿ ವಿಡಿಯೊ ಕರೆ; ಕಣ್ಣೀರಾದ ಆಟಗಾರ್ತಿಯರು ಹಾಗಿದ್ದರೂ ಬಜರಂಗ್ ಪೂನಿಯಾಗೆ ಮಗದೊಂದು ಅವಕಾಶವಿದ್ದು, ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. , 💪 # #Cheer4India #Tokyo2020 # # ../1Xwr7vm6xn ಈ ಮೊದಲು ಬಜರಂಗ್ ಪೂನಿಯಾ, ಪ್ರೀ-ಕ್ವಾರ್ಟರ್‌ಫೈನಲ್‌ನಲ್ಲಿ ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ಮತ್ತು ಕ್ವಾರ್ಟರ್‌ಫೈನಲ್‌ನಲ್ಲಿ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದರು. ಆದರೆ ಸೆಮಿಫೈನಲ್‌ನಲ್ಲಿ ಮಿಂಚುವಲ್ಲಿ ಭಾರತದ ಪೈಲ್ವಾನ ವಿಫಲರಾದರು. ಟೋಕಿಯೊ ಒಲಿಂಪಿಕ್ಸ್ ಕುಸ್ತಿ ಪುರುಷರ 57 ಕೆ.ಜಿ ವಿಭಾಗದಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಎರಡನೇ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್‌ ಕುಮಾರ್ 66 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು. टक्कर की कुश्ती थी .. छोड़ी नहीं कोशिश जीतने की आख़िर तक 👏🏽👏🏽 # .. ’ .. 🤗🤗👊🏽👊🏽# # ../aPGufpB59a ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.