| ಮೂವರು ಅಥ್ಲೀಟ್ ಸೇರಿದಂತೆ 24 ಮಂದಿಗೆ ಕೋವಿಡ್ ಟೋಕಿಯೊ: ಮೂವರು ಅಥ್ಲೀಟ್‌ಗಳು ಸೇರಿದಂತೆ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಮತ್ತೆ 24 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣಗಳ ಸಂಖ್ಯೆ ಇದಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆಯು 193ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ:: ಹಾಲಿ ಚಾಂಪಿಯನ್‌ ಅರ್ಜೆಂಟೀನಾ ಮಣಿಸಿ ಕ್ವಾರ್ಟರ್‌ಫೈನಲ್ ತಲುಪಿದ ಭಾರತ ಟೋಕಿಯೊದಲ್ಲಿ ಕೊರೊನಾವೈರಸ್ಸೋಂಕು ಗಣನೀಯವಾಗಿ ವರ್ಧಿಸುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 3,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರದಂದು 3,177 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.