| ಎರಡು ಬಾರಿಯ ಚಾಂಪಿಯನ್ ವಿರುದ್ಧ ಅತನು ದಾಸ್ ಜಯಭೇರಿ ಟೋಕಿಯೊ: ಎರಡು ಬಾರಿಯ ಒಲಿಂಪಿಕ್ಸ್ ಚಾಂಪಿಯನ್ ವಿರುದ್ಧ ಗೆಲುವು ದಾಖಲಿಸಿರುವ ಭಾರತದ ಬಿಲ್ಲುಗಾರ ಅತನು ದಾಸ್ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಆರ್ಚರಿ ಪುರುಷರ ವೈಯಕ್ತಿಕ ವಿಭಾಗದಲ್ಲಿ ಅತನು ದಾಸ್, ವಿಶ್ವ ನಂ.3 ರ‍್ಯಾಂಕ್‌ನ ದಕ್ಷಿಣ ಕೊರಿಯಾದ ಓಹ್ ಜಿನ್ ಹಿಯೆಕ್ ವಿರುದ್ಧ 6-5ರ ಅಂತರದ ರೋಚಕ ಗೆಲುವು ದಾಖಲಿಸಿದರು. ಇದನ್ನೂ ಓದಿ: | ಪ್ರಿ-ಕ್ವಾರ್ಟರ್‌ಗೆ ದೀಪಿಕಾ; ಪದಕದ ಆಸೆ ಜೀವಂತ ಕಳೆದ ದಿನವಷ್ಟೇ 29 ವರ್ಷದ ಅತನು ದಾಸ್ ಅವರ ಪತ್ನಿ ದೀಪಿಕಾ ಕುಮಾರಿ, ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ವಿಶ್ವದ ಅಗ್ರ ಶ್ರೇಯಾಂಕಿತೆ ದೀಪಿಕಾ ಕುಮಾರಿ ಭಾರತದ ಭರವಸೆಯಾಗಿದ್ದಾರೆ. 🇮🇳 @ 3rd 6-5 . !# # #Cheer4India ../IUSbhc7Wb6 ಅತ್ತ ಭಾರತದ ಅಗ್ರ ಬಿಲ್ಲುಗಾರ ಅತನು ದಾಸ್, ಮೊದಲ ಸುತ್ತಿನಲ್ಲಿ ಚೀನಾ ತೈಪೆಯ ಯೂ-ಚೆಂಗ್ ವಿರುದ್ಧ ಗೆಲುವು ದಾಖಲಿಸಿದರು. ಬಳಿಕ ಅದೇ ಲಯ ಕಾಪಾಡಿಕೊಂಡು ಜಿನ್ ಹಿಯೆಕ್ ವಿರುದ್ಧವೂ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಹಾಗೂ ಕಂಚಿನ ಪದಕ ಸಾಧನೆ ಮಾಡಿರುವ ಜಿನ್ ಜಿಯೆಕ್, ಪ್ರಸ್ತುತ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತಂಡ ವಿಭಾಗದಲ್ಲಿ ಸ್ವರ್ಣ ಪದಕ ಗೆದ್ದಿದ್ದಾರೆ. ' '! 🏹🎯😁 , @ 2012 16 ' #Cheer4India#Tokyo2020@ @ @ @india_archery @PIB_India ../yl4uYLkbry ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.