| ಪದಕದ ಸುತ್ತಿಗೆ ಲಗ್ಗೆಯಿಟ್ಟ ಶೂಟರ್ ಸೌರಭ್ ಚೌಧರಿ ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತದ ಸೌರಭ್ ಚೌಧರಿ ಪದಕದ ನಿರೀಕ್ಷೆ ಮೂಡಿಸಿದ್ದಾರೆ. ಶನಿವಾರ ನಡೆದ ಪುರುಷರ 10 ಮೀ. ಏರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿರುವ ಸೌರಭ್ ಅಮೋಘ ಸಾಧನೆ ಮಾಡಿದರು. ಪದಕ ಸುತ್ತಿನಲ್ಲೂ ಇದೇ ಪ್ರದರ್ಶನ ನೀಡಲು ಸಾಧ್ಯವಾದರೆ ಸೌರಭ‌್‌ಗೆ ಇತಿಹಾಸ ರಚಿಸುವ ಸುವರ್ಣಾವಕಾಶವಿದೆ. ಫೈನಲ್ ಹಂತವು ಭಾರತೀಯ ಕಾಲಮಾನ ಇಂದು ಅಪರಾಹ್ನ 12ಕ್ಕೆ ಸರಿಯಾಗಿ ಆರಂಭವಾಗಲಿದೆ. ಇದೇ ವಿಭಾಗದಲ್ಲಿ ಸ್ಪರ್ಧಿಸಿದ ಭಾರತದವರೇ ಆದ ಅಭಿಶೇಕ್ ವರ್ಮಾ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. @SChaudhary2002 ' 10m 1st . @abhishek_70007 17th . 12 #Cheer4India ../TUuoIj5Lko ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.