ಒಲಿಂಪಿಕ್ಸ್‌: ಚಿನ್ನ ಗೆದ್ದರೆ ₹ 6 ಕೋಟಿ – ಹರಿಯಾಣ ಸರ್ಕಾರ ಘೋಷಣೆ ಚಂಡೀಗಡ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ತನ್ನ ರಾಜ್ಯದ ಅಥ್ಲೀಟ್‌ಗಳಿಗೆ ₹ 6 ಕೋಟಿ ಬಹುಮಾನ ನೀಡುವುದಾಗಿ ಹರಿಯಾಣ ಸರ್ಕಾರ ಬುಧವಾರ ಪ್ರಕಟಿಸಿದೆ. ಬೆಳ್ಳಿ ಪದಕ ವಿಜೇತರಿಗೆ ₹ 4 ಕೋಟಿ ಮತ್ತು ಕಂಚು ಗೆದ್ದವರಿಗೆ ₹ 2.50 ಕೋಟಿ ನೀಡುವುದಾಗಿಯೂ ಸರ್ಕಾರ ಘೋಷಿಸಿದೆ. ಅಂತರರಾಷ್ಟ್ರೀಯ ಒಲಿಂಪಿಕ್ ದಿನದ ಪ್ರಯುಕ್ತ ಒಲಿಂಪಿಕ್ ಪದಕ ವಿಜೇತರೊಂದಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಸಂವಾದ ನಡೆಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಕ್ರೀಡಾ ಸಚಿವ ಸಂದೀಪ್ ಸಿಂಗ್ ಈ ವಿಷಯವನ್ನು ಪ್ರಕಟಿಸಿದರು. ‘ರಾಜ್ಯದ 30 ಅಥ್ಲೀಟ್‌ಗಳು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಅವರ ಸಿದ್ಧತೆಗೆ ತಲಾ ₹ 5 ಲಕ್ಷ ನೆರವು ನೀಡಲಾಗಿದೆ ಎಂದು ಸಂದೀಪ್ ಇದೇ ವೇಳೆತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.