ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌: ಆರನೇ ಚಿನ್ನದ ಪದಕದ ಮೇಲೆ ಮೇರಿ ಕೋಮ್ ಕಣ್ಣು ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ಇಲ್ಲಿ ಭಾನುವಾರ ನಡೆಯಲಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಲು ಪಣತೊಟ್ಟಿದ್ದಾರೆ. ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಲಿದ್ದಾರೆ. 51 ಕೆಜಿ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಕಜಕಸ್ತಾನದ ನಜಿಮ್‌ ಕಿಜೈಬಿ ವಿರುದ್ಧ ಮೇರಿ ಕೋಮ್‌ ಹೋರಾಡಲಿದ್ದಾರೆ. ಗುರುವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ಮಂಗೋಲಿಯಾದ ಲುಟ್ಸೈಖನ್ ಅಲ್ಟಂನ್ಸೆನ್ಸೆಗ್‌ ಅವರನ್ನು ಮೇರಿ 4–1ರಲ್ಲಿ ಮಣಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.