ಕೆಒಎಯಿಂದ ನಜೀಬ್‌, ತೇಜಸ್ವಿನಿ ಬಾಯಿಗೆ ನೆರವು ಬೆಂಗಳೂರು: ಕರ್ನಾಟಕ ಒಲಿಂಪಿಕ್ ಸಂಸ್ಥೆಯು (ಕೆಒಎ) ಕೋವಿಡ್‌ನಿಂದ ಬಳಲುತ್ತಿರುವ ಒಲಿಂಪಿಯನ್ ಜೂಡೊ ಪಟು ನಜೀಬ್ ಅಗಾ ಹಾಗೂ ಸೋಂಕಿನಿಂದಾಗಿ ಪತಿಯನ್ನು ಕಳೆದುಕೊಂಡ ಕಬಡ್ಡಿ ಆಟಗಾರ್ತಿ ತೇಜಸ್ವಿನಿ ಬಾಯಿ ಅವರಿಗೆ ತಲಾ ಒಂದು ಲಕ್ಷ ರೂಪಾಯಿ ನೆರವು ಪ್ರಕಟಿಸಿದೆ. ಕೆಒಎ ಅಧ್ಯಕ್ಷ ಕೆ.ಗೋವಿಂದರಾಜ್ ಈ ವಿಷಯ ತಿಳಿಸಿದ್ದಾರೆ. 1996ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ನಜೀಬ್ ದೇಶವನ್ನು ಪ್ರತಿನಿಧಿಸಿದ್ದರು. ಸದ್ಯ ಅವರು ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತ ತೇಜಸ್ವಿನಿ ಬಾಯಿ ಅವರ ಪತಿ ನವೀನ್ ಅವರು ಇತ್ತೀಚೆಗೆ ಕೋವಿಡ್‌ನಿಂದಾಗಿ ಮೃತಪಟ್ಟಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.