ಆಸ್ಪತ್ರೆಯಿಂದ ಮನೆಗೆ ಪ್ರಕಾಶ್ ಪಡುಕೋಣೆ ಬೆಂಗಳೂರು: ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಅವರು ಬುಧವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಅವರು ನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ. 1980ರಲ್ಲಿ ಪ್ರಕಾಶ್ ಆಲ್‌ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.