ಹಾಕಿ: ಅ.9ರಿಂದ ಏಷ್ಯನ್ ಚಾಂಪಿಯನ್ಸ್ ಟೂರ್ನಿ ಕ್ವಾಲಾಲಂಪುರ: ಏಷ್ಯನ್‌ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯು ಈ ವರ್ಷದ ಅಕ್ಟೋಬರ್‌ 1ರಿಂದ 9ರವರೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿದೆ. ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಈ ಟೂರ್ನಿಯನ್ನು ಎರಡು ಬಾರಿ ಮುಂದೂಡಲಾಗಿತ್ತು. ಏಷ್ಯನ್ ಹಾಕಿ ಫಡೆರೇಷನ್‌ (ಎಎಚ್‌ಎಫ್‌) ಮಂಗಳವಾರ ಈ ವಿಷಯ ತಿಳಿಸಿದೆ. ‘ಕೋವಿಡ್‌ ಸೃಷ್ಟಿಸಿದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಕ್ಟೋಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ‘ ಎಂದು ಎಎಚ್‌ಎಫ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಯ್ಯಬ್ ಇಕ್ರಂ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.