ಕ್ರೀಡಾಕೂಟಗಳ ಆಯೋಜನೆ ಭಾರತಕ್ಕೆ ಐಒಸಿ ಅನುಮತಿ ಲಾಸೇನ್, ಸ್ವಿಟ್ಜರ್ಲೆಂಡ್: ಪ್ರಮುಖ ಕ್ರೀಡಾಕೂಟಗಳ ಆಯೋಜನೆಗೆ ಬಿಡ್ ಸಲ್ಲಿಸಲು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಅನುಮತಿ ನೀಡಿದೆ. ಪಾಕಿಸ್ತಾನದ ಕ್ರೀಡಾಪಟುಗಳು ಭಾರತದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದನ್ನು ಭಾರತ ನಿಷೇಧಿಸಿದ ನಂತರ ಐಒಸಿ ಭಾರತಕ್ಕೆ ಫೆಬ್ರುವರಿಯಲ್ಲಿ ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಗುರುವಾರ ತೆಗೆದು ಹಾಕಲಾಗಿದೆ. ಪುಲ್ವಾಮಾ ದಾಳಿಯ ನಂತರ, ಭಾರತದಲ್ಲಿ ನಡೆದಿದ್ದ ಶೂಟಿಂಗ್ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಬೇಕಾಗಿದ್ದ ಪಾಕಿಸ್ತಾನದ ಇಬ್ಬರು ಶೂಟರ್‌ಗಳಿಗೆ ವಿಸಾ ನಿರಾಕರಿಸಲಾಗಿತ್ತು. ಹೀಗಾಗಿ ಐಒಸಿ ಭಾರತ ಒಲಿಂಪಿಕ್ ಸಂಸ್ಥೆಯ ಮೇಲೆ ಕ್ರಮಕ್ಕೆ ಮುಂದಾಗಿತ್ತು. ‘ಕ್ರೀಡಾಕೂಟಗಳನ್ನು ಆಯೋಜಿಸುವಾಗ ಐಒಸಿಯ ನಿಯಮಾವಳಿಗಳನ್ನು ಜಾರಿಗೊಳಿಸಲಾಗುವುದೆಂದೂ ಎಲ್ಲ ದೇಶಗಳ ಕ್ರೀಡಾಪಟುಗಳಿಗೆ ಪ್ರವೇಶ ಅವಕಾಶ ನೀಡುವುದಾಗಿಯೂ ಭಾರತ ಸರ್ಕಾರ ಭರವಸೆ ನೀಡಿದೆ’ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಕ್ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.