ಡೈಮಂಡ್‌ ಲೀಗ್‌ನಲ್ಲಿ ಶಿವಪಾಲ್‌ ಕಣಕ್ಕೆ ನವದೆಹಲಿ: ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ಶಿವಪಾಲ್‌ ಸಿಂಗ್‌ ಅವರು ಮುಂಬರುವ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ (ಎಎಫ್‌ಐ) ಬುಧವಾರ ಈ ವಿಷಯ ತಿಳಿಸಿದೆ. ಡೈಮಂಡ್‌ ಲೀಗ್, ಜೂನ್ 13ರಿಂದ ಓಸ್ಲೊದಲ್ಲಿ ನಡೆಯಲಿದೆ. 23 ವರ್ಷ ವಯಸ್ಸಿನ ಶಿವಪಾಲ್‌ ಅವರು ಹೋದ ತಿಂಗಳು ದೋಹಾದಲ್ಲಿ ನಡೆದಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. 86.23 ಮೀಟರ್ಸ್‌ ದೂರ ಜಾವೆಲಿನ್‌ ಎಸೆದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದರು. ಈ ಮೂಲಕ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಕತಾರ್‌ನಲ್ಲಿ ಆಯೋಜನೆಯಾಗಿರುವ ವಿಶ್ವ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದ್ದರು. ಶಿವಪಾಲ್‌ ಅವರು ಇದೇ ಮೊದಲ ಸಲ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೋದ ವರ್ಷ ಜ್ಯೂರಿಚ್‌ನಲ್ಲಿ ನಿಗದಿಯಾಗಿದ್ದ ಲೀಗ್‌ನಲ್ಲಿ ಭಾಗವಹಿಸಿದ್ದನೀರಜ್‌ ಚೋಪ್ರಾ ನಾಲ್ಕನೇ ಸ್ಥಾನ ಗಳಿಸಿದ್ದರು. ಗಾಯದ ಕಾರಣ ನೀರಜ್‌ ಈ ಸಲ ಲೀಗ್‌ನಿಂದ ಹಿಂದೆ ಸರಿದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.