ಒಲಿಂಪಿಯಾಡ್‌: ಚೈತನ್ಯ ಸ್ಕೂಲ್‌ ಸಾಧನೆ ಬೆಂಗಳೂರು: ಇಂಟ್ಸೊ ಶೈಕ್ಷಣಿಕ ಸಂಸ್ಥೆ ವತಿಯಿಂದ ನಡೆದ ರಾಷ್ಟ್ರಮಟ್ಟದ ಒಲಿಂಪಿಯಾಡ್‌ ಸ್ಪರ್ಧೆಗಳಲ್ಲಿ ನಗರದ ಚೈತನ್ಯ ಟೆಕ್ನೊ ಸ್ಕೂಲ್‌ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಮೂರನೇ ತರಗತಿಯಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧೆಯಲ್ಲಿ ಈ ಶಾಲೆಯ101 ವಿದ್ಯಾರ್ಥಿಗಳು ಬಹುಮಾನವಾಗಿಲ್ಯಾಪ್‌ಟಾಪ್‌ಗಳನ್ನು ಗೆದ್ದು ಕೊಂಡರು. ಅಲ್ಲದೆ 169 ವಿದ್ಯಾರ್ಥಿಗಳು ಟ್ಯಾಬ್‌ಗಳನ್ನು ಪಡೆದುಕೊಂಡು ಸಾಧನೆ ಮಾಡಿದರು. ಸ್ಪರ್ಧೆಯಲ್ಲಿ81 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 88 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿ ಮತ್ತು 113 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದರು. ಒಟ್ಟಾರೆ 2,930 ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ‍ಪಡೆದುಕೊಂಡರು. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಚೈತನ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷಡಾ.ಬಿ.ಎಸ್‌.ರಾವ್‌ ಅಭಿನಂದಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.