ಸೈನಾಗೆ ವಿಶ್ರಾಂತಿ ನವದೆಹಲಿ: ಗ್ಯಾಸ್ಟ್ರೊ ಎಂಟರೈಟಿಸ್‌ ಸಮಸ್ಯೆಯಿಂದ ಬಳಲುತ್ತಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್‌, ಸ್ವಿಸ್ ಓಪನ್‌ ಚಾಂಪಿಯನ್‌ಷಿಪ್‌ನಿಂದ ಹಿಂದೆ ಸರಿದಿದ್ದಾರೆ. ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಷಿಪ್‌ ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ಸೈನಾ ಆ ಟೂರ್ನಿಯ ಸಂದರ್ಭದಲ್ಲಿ ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದುದಾಗಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು ಸ್ವಿಸ್ ಓಪನ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ಬರೆದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.