ನಾಳೆಯಿಂದ ಮಹಿಳಾ ಹಾಕಿ ತಂಡದ ಶಿಬಿರ ನವದೆಹಲಿ: ಬೆಂಗಳೂರಿನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ಕೇಂದ್ರದಲ್ಲಿ ಇದೇ 18ರಿಂದ ರಾಷ್ಟ್ರೀಯ ಮಹಿಳಾ ಹಾಕಿ ಶಿಬಿರ ನಡೆಯಲಿದೆ. ನ್ಯೂಜಿಲೆಂಡ್‌ ಪ್ರವಾಸಕ್ಕೆ ಸಿದ್ಧತೆಯಾಗಿ ನಡೆಯಲಿರುವ ಶಿಬಿರಕ್ಕೆ 33 ಆಟಗಾರ್ತಿಯರ ಹೆಸರನ್ನು ಶನಿವಾರ ಪ್ರಕಟಿಸಲಾಗಿದೆ. ಮುಂದಿನ ವರ್ಷದ ಜನವರಿ–ಫೆಬ್ರುವರಿಯಲ್ಲಿ ಭಾರತ, ನ್ಯೂಜಿಲೆಂಡ್‌ ಪ್ರವಾಸ ಕೈಗೊಳ್ಳಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.