ಅಂತರ ವಿವಿ ಅಥ್ಲೆಟಿಕ್ಸ್‌ ನಾಳೆಯಿಂದ ಮಂಗಳೂರು: ಮೂಡುಬಿದಿರೆಯಲ್ಲಿ ಇದೇ 24ರಿಂದ 28ವರೆಗೆ ನಡೆಯುವ ಅಖಿಲ ಭಾರತ 79ನೇ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‌ನಲ್ಲಿ 300ಕ್ಕೂ ಹೆಚ್ಚಿನ ವಿವಿಗಳ 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್‌ ಸಿ.ಕೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರು ವಿಶ್ವವಿದ್ಯಾಲಯ ಹಾಗೂ ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ ಮಾತನಾಡಿ ‘ಉದ್ಘಾಟನೆಗೂ ಮುನ್ನ ಮೆರವಣಿಗೆ ನಡೆಯಲಿದ್ದು, ಕಲೆ, ಸಂಸ್ಕೃತಿ ಬಿಂಬಿಸುವ 79 ತಂಡಗಳು ಪಾಲ್ಗೊಳ್ಳಲಿವೆ. ಪಿ.ಟಿ.ಉಷಾ ಅವರನ್ನು ಗೌರವಿಸಲಾಗುವುದು’ ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.