ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಆರನೇ ಚಿನ್ನಕ್ಕೆ ಮುತ್ತಿಕ್ಕಿದ ಮೇರಿಕೋಮ್‌ ನವದೆಹಲಿ: ಭಾರತದ ಎಂ.ಸಿ.ಮೇರಿ ಕೋಮ್‌, ಶನಿವಾರ ಮಹಿಳೆಯರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಜಯಿಸಿ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಶನಿವಾರ ನಡೆದ 48 ಕೆ.ಜಿ.ವಿಭಾಗದ ಫೈನಲ್‌ನಲ್ಲಿ ಮಣಿಪುರದ ಮೇರಿ 5–0 ಪಾಯಿಂಟ್ಸ್‌ನಿಂದ ಉಕ್ರೇನ್‌ನ ಹನಾ ಒಖೋಟಾ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ. ಚಾಂಪಿಯನ್‌ಷಿಪ್‌ನಲ್ಲಿ ಆರು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್‌ ಎಂಬ ಹಿರಿಮೆಗೆ ಮೇರಿ ಭಾಜನರಾಗಿದ್ದಾರೆ. ಜೊತೆಗೆ ವಿಶ್ವ ಚಾಂಪಿಯನ್‌ಷಿ‍ಪ್‌ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದ ಕ್ಯೂಬಾದ ಫೆಲಿಕ್ಸ್‌ ಸೇವನ್‌ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. ತಾವು ಗೆದ್ದ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸುವುದಾಗಿ ಅವರು ತಿಳಿಸಿದರು. ಫೆಲಿಕ್ಸ್‌ ಅವರು 1986 ರಿಂದ 1989ರ ಅವಧಿಯಲ್ಲಿ ಪುರುಷರ ಹೆವಿವೇಟ್‌ ವಿಭಾಗದಲ್ಲಿ ಒಟ್ಟು ಆರು ಚಿನ್ನ ಮತ್ತು ಒಂದು ಬೆಳ್ಳಿಯ ಪದಕ ಜಯಿಸಿದ್ದರು. 2002ರಲ್ಲಿ ಮೊದಲ ಬಾರಿ ಮೇರಿ, ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದಿದ್ದರು. ಆಗ ಅವರು 45 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. 2005, 2006 ಮತ್ತು 2008ರಲ್ಲಿ 46 ಕೆ.ಜಿ ವಿಭಾಗದಲ್ಲಿ ಚಿನ್ನ ಗಳಿಸಿದ್ದರು. 2010ರಲ್ಲಿ 48 ಕೆ.ಜಿ ವಿಭಾಗದಲ್ಲಿ ಕಣಕ್ಕೆ ಇಳಿದು ಮೊದಲಿಗರಾಗಿದ್ದರು. . ’ . ’ . . @ # , 6th #WWCHs2018 ../DFzvuJBa3b . , . # ../HwLKuCFH7W ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.