ನಾಳೆಯಿಂದ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವ ವಿದ್ಯಾನಿಲಯವು (ಬಿಸಿಯು) ಬುಧವಾರದಿಂದ ಅಂತರಕಾಲೇಜು ಎರಡನೇ ವಾರ್ಷಿಕ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ ಅನ್ನು ಆಯೋಜಿಸಿದೆ. ಇಲ್ಲಿನ ವಿದ್ಯಾನಗರದ ಡಿವೈಇಎಸ್‌ ಕ್ರೀಡಾಂಗಣದಲ್ಲಿ ಕೂಟ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಈ ಚಾಂಪಿಯನ್‌ಷಿಪ್‌ನಲ್ಲಿ ಬಿಸಿಯು ಅಧೀನಕ್ಕೆ ಒಳಪಟ್ಟ 100 ಕಾಲೇಜುಗಳ 1500ಕ್ಕಿಂತ ಹೆಚ್ಚು ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ. ಮಹಿಳಾ ಮತ್ತು ಪುರುಷರಿಗಾಗಿ 15 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.