ಬಿಬಿಎಫ್‌ಐ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್‌ ಆಯ್ಕೆ ಬೆಂಗಳೂರು: ಕರ್ನಾಟಕದ ದಿನೇಶ್‌ ಅವರು ಭಾರತ ಬಾಲ್‌ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಬಿಎಫ್‌ಐ) ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಹಾಸನದ ದಿನೇಶ್‌, ಮುಂದಿನ ನಾಲ್ಕು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಕನ್ನಡಿಗ ಎಂಬ ಹಿರಿಮೆಗೂ ಭಾಜನರಾಗಿದ್ದಾರೆ. ಬಾಲ್‌ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಆಫ್‌ ಕರ್ನಾಟಕದ ಕಾರ್ಯದರ್ಶಿ ಆಗಿರುವ ದಿನೇಶ್‌, ಈ ಹಿಂದೆ ರಾಷ್ಟ್ರೀಯ ಫೆಡರೇಷನ್‌ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.