ಕೊಕ್ಕೊ: ಕರ್ನಾಟಕದ ಪಾರಮ್ಯ ಮೆರೆಯುವುದೇ? ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ತಂಡಗಳು ಛತ್ತೀಸಗಡದಲ್ಲಿ ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌ಷಿಪ್‌ನಲ್ಲಿ ಪಾರಮ್ಯ ಮುಂದುವರಿಸಲು ಪ್ರಯತ್ನಿಸಲಿವೆ. ಅಲೋನ್ಸ್‌ ಪಬ್ಲಿಕ್ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ನ ಮೊದಲ ದಿನವಾದ ಗುರುವಾರ ಮಳೆಯಿಂದಾಗಿ ಪಂದ್ಯಗಳು ನಡೆಯಲಿಲ್ಲ. ಶುಕ್ರವಾರ ಹಾಲಿ ಚಾಂಪಿಯನ್‌ ಮಹಾರಾಷ್ಟ್ರ ತಂಡ ಅಂಡಮಾನ್ ಮತ್ತು ನಿಕೋಬಾರ್ ದ್ವೀಪವನ್ನು, ಕರ್ನಾಟಕವು ಬಿಹಾರವನ್ನು ಎದುರಿಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.