ಅಥ್ಲೆಟಿಕ್ಸ್‌: ಅವಿನಾಶ್ ದಾಖಲೆ ದೋಹಾ: ಭಾರತದ ಅವಿನಾಶ್ ಸಬ್ಳೆ ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಪುರುಷರ 3000 ಮೀಟರ್ಸ್ ಸ್ಟೀಪಲ್ ಚೇಸ್‌ನಲ್ಲಿ ದಾಖಲೆ ಬರೆದರು. ಸ್ಪರ್ಧೆಯ ಫೈನಲ್ ಪ್ರವೇಶಿಸಿದ ಅವರು ಚಾಂಪಿಯನ್‌ಷಿಪ್‌ನ ಟ್ರ್ಯಾಕ್‌ ವಿಭಾಗದಲ್ಲಿ ಅಂತಿಮ ಸುತ್ತು ಪ್ರವೇಶಿಸಿದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡರು. ಹೀಟ್ಸ್‌ನಲ್ಲಿ ಅವಿನಾಶ್ 6 ನಿಮಿಷ 25:23 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು. ಅವರ ಈ ಹಿಂದಿನ ಶ್ರೇಷ್ಠ ಸಾಧನೆ 8 ನಿಮಿಷ 28.23 ಆಗಿತ್ತು. ಮೂರನೇ ಹೀಟ್ಸ್‌ನಲ್ಲಿ ಸ್ಪರ್ಧಿಸಿದ್ದ ಅವರು 7ನೇ ಸ್ಥಾನ ಪಡೆದರು. ಒಟ್ಟಾರೆ 20ನೆಯವರಾದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.