ಸಂಗ್ವಾನ್‌ ಮೇಲೆ ನಿಷೇಧ ನವದೆಹಲಿ: ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದು ಸಾಬೀತಾಗಿರುವ ಕಾರಣ ಭಾರತದ ಬಾಕ್ಸರ್‌ ಸುಮಿತ್‌ ಸಂಗ್ವಾನ್‌ ಮೇಲೆ ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ (ನಾಡಾ) ಗುರುವಾರ ಒಂದು ವರ್ಷ ನಿಷೇಧ ಹೇರಿದೆ. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಸುಮಿತ್‌, ಏಷ್ಯನ್‌ ಕ್ರೀಡಾಕೂಟದಲ್ಲಿ ಬೆಳ್ಳಿಯ ಪದಕ ಜಯಿಸಿದ್ದರು. ತಕ್ಷಣದಿಂದಲೇ ನಿಷೇಧ ಜಾರಿಯಾಗಿರುವ ಕಾರಣ ಅವರು ಒಲಿಂಪಿಕ್‌ ಅರ್ಹತಾ ಟ್ರಯಲ್ಸ್‌ನಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.