ಫಿಬಾ ಸ್ಪರ್ಧಾ ಆಯೋಗಕ್ಕೆ ಗೋವಿಂದರಾಜ್ ಬೆಂಗಳೂರು: ಭಾರತ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯ (ಬಿಎಫ್‌ಐ) ಅಧ್ಯಕ್ಷ ಕೆ.ಗೋವಿಂದರಾಜ್ ಅವರನ್ನು ಅಂತರರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಫೆಡರೇಷನ್‌ನ (ಫಿಬಾ) ಸ್ಪರ್ಧಾ ಆಯೋಗಕ್ಕೆ ಮರು ನೇಮಕ ಮಾಡಲಾಗಿದೆ. ಫಿಬಾದ ಅಸೆಂಬ್ಲಿಗೆ ದಕ್ಷಿಣ ಏಷ್ಯಾ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯ (ಸಬಾ) ಪ್ರತಿನಿಧಿಯಾಗಿಯೂ ಅವರನ್ನು ಆಯ್ಕೆ ಮಾಡಲಾಗಿದೆ. ಫಿಬಾದ ಅಪೀಲು ಸಮಿತಿಗೆ ಬಿಎಫ್‌ಐ ಪ್ರಧಾನ ಕಾರ್ಯದರ್ಶಿ ಚಂದ್ರಮುಖಿ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿಯ ಅವಧಿ 2023ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.