ಬಳ್ಳಾರಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆ: ರಾಜ್ಯಕ್ಕೆ ಆಯ್ಕೆ ಹೊಸಪೇಟೆ: ಬಳ್ಳಾರಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾಗಿರುವ ಇಲ್ಲಿನ ಜಂಬುನಾಥಹಳ್ಳಿ ಸಮೀಪದ ಸರ್ಕಾರಿ ಆದರ್ಶ ವಿದ್ಯಾಲಯದ ಬಿ. ಸುಹಾಸ್‌ ಮತ್ತು ಶಶಾಂಕ್‌ ಎಸ್‌. ಹುಗ್ಗಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸುಹಾಸ್‌ ಮೂರನೇ ಸಲ, ಶಶಾಂಕ್‌ ಎರಡನೇ ಸಲ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಲಯದ ಮುಖ್ಯಶಿಕ್ಷಕಿ ಆರ್‌. ಸುಲೋಚನಾಬಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.