ಮಳೆ: ಅಭ್ಯಾಸ ಪಂದ್ಯ ರದ್ದು ಸೂರತ್‌: ದಕ್ಷಿಣ ಆಫ್ರಿಕಾ ಮಹಿಳಾ ತಂಡ ಹಾಗೂ ಮಂಡಳಿ ಅಧ್ಯಕ್ಷರ ಇಲೆವನ್‌ ನಡುವೆ ಶುಕ್ರವಾರ ನಡೆಯಬೇಕಿದ್ದ ಮೊದಲ ಟ್ವೆಂಟಿ–20 ಅಭ್ಯಾಸ ಪಂದ್ಯ ಮಳೆಯ ಕಾರಣ ರದ್ದಾಗಿದೆ. ಎರಡನೇ ಅಭ್ಯಾಸ ಪಂದ್ಯ ಇಲ್ಲಿಯ ಲಾಲ್‌ಭಾಯ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಟ್ವೆಂಟಿ–20 ಸರಣಿಯ ಮೊದಲ ಪಂದ್ಯಸೆಪ್ಟೆಂಬರ್‌ 24ರಂದು ಆಯೋಜನೆಯಾಗಿದೆ. ಐದು ಪಂದ್ಯಗಳ ಟ್ವೆಂಟಿ–20 ಸರಣಿಯ ಬಳಿಕ ಮೂರು ಏಕದಿನ ಪಂದ್ಯಗಳಲ್ಲಿ ತಂಡಗಳು ಹಣಾಹಣಿ ನಡೆಸಲಿವೆ. ಭಾರತ ತಂಡದ15 ವರ್ಷದ ಶೆಫಾಲಿ ವರ್ಮಾ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.