ಏಷ್ಯನ್‌ ಕಪ್‌ ಸೈಕ್ಲಿಂಗ್‌: ಚಿನ್ನ ಗೆದ್ದ ವೆಂಕಪ್ಪ ಹುಬ್ಬಳ್ಳಿ: ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದ ವೆಂಕಪ್ಪ ಕೆಂಗಲಗುತ್ತಿ ಅವರು ನವದೆಹಲಿಯಲ್ಲಿ ನಡೆಯುತ್ತಿರುವ ಏಷ್ಯನ್‌ ಕಪ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನ ಜೂನಿಯರ್‌ ವಿಭಾಗದಲ್ಲಿ ಮಂಗಳವಾರ ಚಿನ್ನದ ಪದಕ ಜಯಿಸಿದ್ದಾರೆ. ಮೂರು ಕಿ.ಮೀ. ವೈಯಕ್ತಿಕ ಪರ್ಸೂಟ್‌ ಸ್ಪರ್ಧೆಯಲ್ಲಿ ವೆಂಕಪ್ಪ ಈ ಸಾಧನೆ ಮಾಡುವ ಮೂಲಕ ಡಬಲ್‌ ಗೌರವಕ್ಕೆ ಪಾತ್ರರಾದರು. ಸೋಮವಾರ 10 ಕಿ.ಮೀ. ಸ್ಕ್ರ್ಯಾಚ್ ರೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.