ಏಷ್ಯನ್‌ ಕ್ರೀಡಾಕೂಟಕ್ಕೆ ಮೈಸೂರಿನ ವರ್ಷಾ ಮೈಸೂರು: ಸ್ಕೇಟಿಂಗ್‌ ಪಟು ವರ್ಷಾ ಎಸ್‌.ಪುರಾಣಿಕ್‌ ಅವರು ಇಂಡೊನೇಷ್ಯಾದ ಜಕಾರ್ತಾ ಪಾಲೆಂಬಾಗ್‌ನಲ್ಲಿ ನಡೆಯಲಿರುವ ಏಷ್ಯಾನ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಆ.18ರಿಂದ ಸೆ.2ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ ಅವರು ರೋಲರ್‌ ಸ್ಕೇಟಿಂಗ್‌ ವಿಭಾಗದ 20 ಕಿ.ಮೀ. ಮ್ಯಾರಥಾನ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಗ್ರೇಟರ್‌ ನೊಯಿಡಾದಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ವರ್ಷಾ ಸೇರಿದಂತೆ ನಾಲ್ವರು ಸ್ಕೇಟರ್‌ಗಳನ್ನು ಆಯ್ಕೆ ಮಾಡಲಾಗಿದೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಇದ್ದಾರೆ. ಜೆಎಸ್‌ಎಸ್‌ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್‌, ಎಂ.ಡಿ. ಓದಿರುವ ಅವರು ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.