ರಾಷ್ಟ್ರೀಯ ಕಬಡ್ಡಿಯಲ್ಲಿ ಪ್ರಥಮ ಸ್ಥಾನ: ಆರ್ಥಿಕ ನೆರವಿಗೆ ಮನವಿ ಮಾಗಡಿ: ‘ಗ್ರಾಮೀಣ ಹಿನ್ನೆಲೆಯ ಕ್ರೀಡಾಪಟು ಅಗಲಕೋಟೆ ಎನ್‌.ವಿನೋದ್‌, ಗೋವಾದಲ್ಲಿ ನಡೆದ ‘ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ’ಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಗಳಿಸಿದ್ದಾರೆ. ಸಂಯುಕ್ತ ಭಾರತೀಯ ಖೇಲ್‌ ಪೌಂಡೇಷನ್‌ ಕ್ಲಬ್‌ ಇವರ ಸಾಧನೆ ಗುರುತಿಸಿ, ದುಬೈನಲ್ಲಿ ನಡೆಯಲಿರುವ 19 ವರ್ಷದವರ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ ಮಾಡಿದ್ದಾರೆ’ ಎಂದು ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸಿ.ಬಿ.ಅಶೋಕ್‌ ತಿಳಿಸಿದರು. ‘ಬಡತನದ ಕುಟುಂಬದಿಂದ ಬಂದಿರುವ ಎನ್‌.ವಿನೋದ್‌ ದುಬೈಗೆ ಹೋಗಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಹಣಕಾಸಿನ ತೊಂದರೆ ಎದುರಿಸುತ್ತಿದ್ದಾರೆ. ಕ್ರೀಡಾಭಿಮಾನಿಗಳು ಪ್ರೋತ್ಸಾಹ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.