ಬ್ರಯಾನ ಉದ್ದೀಪನ ಮದ್ದು ಸೇವನೆ ಸಾಬೀತು ಕಿಂಗ್ಸ್‌ಟನ್‌, ಜಮೈಕಾ: 20 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಎರಡು ಬಾರಿ ಚಿನ್ನ ಗೆದ್ದಿರುವ ಬ್ರಯಾನ ವಿಲಿಯಮ್ಸ್‌ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿದೆ. ಹೀಗಾಗಿ ಅವರಿಗೆ ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ. 17 ವರ್ಷದ ಬ್ರಯಾನ ಅವರು ಡ್ಯೂರೆಟಿಕ್ ಹೈಡ್ರೋಕ್ಲೋರೊಥಯಾಸೈಡ್‌ ಸೇವಿಸಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ಜಮೈಕಾದ ಗ್ಲೀನರ್ ಪತ್ರಿಕೆ ವರದಿ ಮಾಡಿದೆ. ಜೂನ್‌ನಲ್ಲಿ ನಡೆದಿದ್ದ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಅವರು 100 ಮೀಟರ್ಸ್ ಓಟದಲ್ಲಿ ಪಾಲ್ಗೊಂಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.