ಟೈಗರ್ ಎಡಗಾಲಿಗೆ ಶಸ್ತ್ರಕ್ರಿಯೆ ಲಾಸ್ ಏಂಜಲೀಸ್: ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದಾಗಿ ತಿಳಿಸಿರುವ ರೇಸ್ ವಾಹನ ಚಾಲಕ ಟೈಗರ್ ವುಡ್ಸ್‌ ಜಪಾನ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಪಿಜಿಎ ಟೂರ್‌ನ ಆರಂಭಿಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಫಿಟ್ ಆಗಿರುವುದಾಗಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಈ ವಿಷಯವನ್ನು ಬರೆದುಕೊಂಡಿರುವ ವುಡ್ಸ್‌ ‘ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಂದಿನ ವಾರ ಅಭ್ಯಾಸ ಆರಂಭಿಸುವ ನಿರೀಕ್ಷೆ ಇದೆ’ ಎಂದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.