ಬ್ಯಾಸ್ಕೆಟ್‌ಬಾಲ್‌ ಲೀಗ್‌ ಮುಂದಕ್ಕೆ ಬೆಂಗಳೂರು: ರಾಜ್ಯದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಂಡ್ಯ (ಆಗಸ್ಟ್‌ 28ರಿಂದ 31), ಶಿವಮೊಗ್ಗ (ಸೆಪ್ಟೆಂಬರ್‌ 7ರಿಂದ 10) ಹಾಗೂ ಬೆಳಗಾವಿಯಲ್ಲಿ (ಅಕ್ಟೋಬರ್‌ 3ರಿಂದ 6) ನಡೆಸಲು ಉದ್ದೇಶಿಸಿದ್ದ ಕರ್ನಾಟಕ ಬ್ಯಾಸ್ಕೆಟ್‌ಬಾಲ್‌ ಲೀಗ್‌ ಅನ್ನು ಮುಂದೂಡಲಾಗಿದೆ. ಈ ವಿಷಯವನ್ನು ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್‌ ಸಂಸ್ಥೆ (ಕೆಎಸ್‌ಬಿಎ) ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.