ಇಂದಿನಿಂದ ರಾಜ್ಯ ಸೀನಿಯರ್‌ ಈಜು ಬೆಂಗಳೂರು: ಕರ್ನಾಟಕ ಈಜು ಸಂಸ್ಥೆ (ಕೆಎಸ್‌ಎ) ಆಶ್ರಯದ ರಾಜ್ಯ ಸೀನಿಯರ್‌ ಈಜು ಚಾಂಪಿಯನ್‌ಷಿಪ್‌ಗೆ ಮಂಗಳವಾರ ಚಾಲನೆ ಸಿಗಲಿದೆ. ಬಸವನಗುಡಿ ಈಜು ಕೇಂದ್ರದಲ್ಲಿ ಒಟ್ಟು ಮೂರು ದಿನ (ಆಗಸ್ಟ್‌ ಒಂದರವರೆಗೆ) ಈಜು, ಡೈವಿಂಗ್‌ ಮತ್ತು ವಾಟರ್‌ಪೊಲೊ ವಿಭಾಗಗಳಲ್ಲಿ ಬೆಳಿಗ್ಗೆ 8.30ರಿಂದ ಸಂಜೆ 5.30ರವರೆಗೆ ಸ್ಪರ್ಧೆಗಳು ನಡೆಯಲಿವೆ. ಈ ಚಾಂಪಿಯನ್‌ಷಿಪ್‌ನಲ್ಲಿ ಈಜುಪಟುಗಳಿಂದ ಮೂಡಿಬರುವ ಸಾಮರ್ಥ್ಯದ ಆಧಾರದಲ್ಲಿ ರಾಷ್ಟ್ರೀಯ ಸೀನಿಯರ್‌ ಚಾಂಪಿಯನ್‌ಷಿಪ್‌ಗೆ ರಾಜ್ಯ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಆಗಸ್ಟ್‌ 31ರಿಂದ ಸೆಪ್ಟೆಂಬರ್‌ 4ರವರೆಗೆ ಭೋಪಾಲ್‌ನಲ್ಲಿ ಆಯೋಜನೆಯಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.