ವಿಶ್ವಕಪ್ ಶೂಟಿಂಗ್‌ ಭಾರತ ಆತಿಥ್ಯ ನವದೆಹಲಿ: ಅಂತರರಾಷ್ಟ್ರೀಯ ಶೂಟಿಂಗ್ ಕ್ರೀಡಾ ಫೆಡರೇಷನ್ (ಐಎಸ್‌ಎಸ್‌ಎಫ್) ಆಯೋಜಿಸುವ ಶೂಟಿಂಗ್ ವಿಶ್ವಕಪ್‌ನ ಮುಂದಿನ ಆವೃತ್ತಿಗೆ ಭಾರತ ಆತಿಥ್ಯ ವಹಿಸಲಿದೆ. ಮಾರ್ಚ್‌ 15ರಿಂದ 26ರ ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೋಮವಾರ ನಡೆದ ಫೆಡರೇಷನ್‌ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ರೈಫಲ್, ಪಿಸ್ತೂಲ್ ಮತ್ತು ಶಾಟ್‌ಗನ್‌ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಟೋಕಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾದ ಶೂಟರ್‌ಗಳಿಗೆ ಅಭ್ಯಾಸ ಮಾಡಲು ವಿಶ್ವಕಪ್‌ ಉತ್ತಮ ಅವಕಾಶ ಒದಗಿಸಲಿದೆ. ಕಳೆದ ವರ್ಷ ವಿಶ್ವಕಪ್ ಫೈನಲ್ಸ್‌ಗೆ ಭಾರತ ಆತಿಥ್ಯ ವಹಿಸಿತ್ತು. ಈ ವರ್ಷದ ಫೆಬ್ರುವರಿಯಲ್ಲಿ ವಿಶ್ವಕಪ್‌ ಸ್ಪರ್ಧೆಗಳು ಇಲ್ಲೇ ನಡೆದಿದ್ದವು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.