ಮಹಿಳೆಯರಿಗೆ 5000 ಸ್ಕಾಲರ್‌ಶಿಪ್‌ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ವಿದ್ಯಾರ್ಥಿನಿಯರಿಗೆ 5000 ಸ್ಕಾಲರ್‌ಶಿಪ್‌ ನೀಡಲು ಅರ್ಜಿ ಆಹ್ವಾನಿಸಿದೆ. ಇದರಲ್ಲಿ 1000 ವಿದ್ಯಾರ್ಥಿ ವೇತನಗಳನ್ನು ಅಂಗವಿಕಲ ವಿದ್ಯಾರ್ಥಿನಿಯರಿಗೆ ಮೀಸಲಿಡಲಾಗಿದೆ. ವರ್ಷಕ್ಕೆ 50 ಸಾವಿರ ರೂಪಾಯಿ ಶಿಷ್ಯವೇತನ ದೊರೆಯಲಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಭಾರತ ಸರ್ಕಾರದ ಒಂದು ಶಾಸನ ಬದ್ಧ ಸಂಸ್ಥೆಯಾಗಿದೆ. ಎಲ್ಲಾ ವರ್ಗದವರಿಗೂ ತಾಂತ್ರಿಕ ಶಿಕ್ಷಣ ಸಿಗಬೇಕು ಎನ್ನುವ ಸದುದ್ದೇಶದಿಂದ ಭಾರತ ಸರ್ಕಾರ ಈ ಮಂಡಳಿಯನ್ನು ರಚಿಸಿದೆ. ತಾಂತ್ರಿಕ ಶಿಕ್ಷಣದಲ್ಲಿ ನೂತನ ಸಂಶೋಧನೆಗಳು ಮತ್ತು ಅಧ್ಯಯನಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ತಾಂತ್ರಿಕ ಶಿಕ್ಷಣಕ್ಕೆ ಹಣಕಾಸು ನೆರವು ನೀಡುವ ಸಲುವಾಗಿ ವಿವಿಧ ಸ್ಕಾಲರ್‌ಶಿಪ್‌ಗಳನ್ನು ನೀಡುತ್ತಿದೆ. ಇದರಲ್ಲಿ ಮಹಿಳೆಯರು ಮತ್ತು ಅಂಗವಿಕಲರ ಶೈಕ್ಷಣಿಕ ಅಭಿವೃದ್ಧಿಗಾಗಿ ‘ಪ್ರಗತಿ’ ವಿದ್ಯಾರ್ಥಿ ವೇತನ ಯೋಜನೆಯನ್ನು ಪರಿಚಯಿಸಿದೆ. ದೇಶದ ಅತಿ ಹಿಂದುಳಿದ ಪ್ರದೇಶಗಳು ಮತ್ತು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ತಾಂತ್ರಿಕ ಶಿಕ್ಷಣದಲ್ಲಿ ಮಹಿಳೆಯರನ್ನು ಮುಂಚೂಣಿಗೆ ತರುವುದೇ ಈ ಪ್ರಗತಿ ಯೋಜನೆಯ ಮುಖ್ಯ ಉದ್ದೇಶ. ಅರ್ಹತೆಗಳು: ಈ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಸ್ಕಾಲರ್‌ಶಿಪ್‌ ನೀಡಲು ಅವಕಾಶವಿದೆ. ಕುಟುಂಬದ ವಾರ್ಷಿಕ ವರಮಾನವು ಎಲ್ಲಾ ರೀತಿಯಿಂದಲೂ 6 ಲಕ್ಷ ರೂಪಾಯಿಗಳನ್ನು ಮೀರುವಂತಿಲ್ಲ. ಆರು ಲಕ್ಷ ರೂಪಾಯಿಗಿಂತ ಹೆಚ್ಚಿನ ಆದಾಯ ಇರುವವರ ಅರ್ಜಿಯನ್ನು ತಿರಸ್ಕರಿಸಲಾಗುವುದು. 2014–15ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆದಿರಬೇಕು. ಈ ಬಗ್ಗೆ ಕಾಲೇಜು ದಾಖಲಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು 2014–15ನೇ ಸಾಲಿನಲ್ಲಿ ಡಿಪ್ಲೊಮಾ ಮತ್ತು ಪದವಿ ಅಭ್ಯಾಸ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್‌ ನೀಡಲು ಅರ್ಜಿಯನ್ನು ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿ ಡಿಪ್ಲೊಮಾ ಅಥವಾ ಇನ್ನಿತರ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಹಾಗೂ ಪಿಯುಸಿಯಲ್ಲಿ ಪಾಸಾಗಿ ಪದವಿ ಓದುತ್ತಿರುವ ಅಂಗವಿಕಲ ಮಹಿಳಾ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಒಟ್ಟು 1000 ಸ್ಕಾಲರ್‌ಶಿಪ್‌ಗಳನ್ನು ನೀಡಲಾಗುತ್ತದೆ. ವರ್ಷಕ್ಕೆ ಬೋಧನಾ ಶುಲ್ಕ ಸೇರಿದಂತೆ 30.000 ರೂಪಾಯಿಗಳ ವಿದ್ಯಾರ್ಥಿ ವೇತನ ದೊರೆಯಲಿದೆ. ಅಲ್ಲದೆ ಸಂಭಾವ್ಯ ಭತ್ಯೆಯಾಗಿ ತಿಂಗಳಿಗೆ 2000 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ. ಇದನ್ನು ವರ್ಷಕ್ಕೆ 10 ತಿಂಗಳುವರೆಗೆ ಮಾತ್ರ ನೀಡಲಾಗುವುದು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಾರ್ಷಿಕ ವರಮಾನ 6 ಲಕ್ಷ ರೂಪಾಯಿ ಒಳಗಿರಬೇಕು. ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು. ದಾಖಲಾತಿ ಪತ್ರಗಳನ್ನು ಸ್ಕ್ಯಾನ್‌ ಮಾಡಿ ಇ–ಮೇಲ್‌ ಮಾಡಬೇಕು. ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಮಾಹಿತಿಯನ್ನು ಈ ಕೆಳಗಿನ ವೆಬ್‌ಸೈಟ್‌ ಮೂಲಕ ಪಡೆಯಬಹುದು. ವೆಬ್‌ ವಿಳಾಸ: .-. ಅರ್ಜಿ ಸಲ್ಲಿಸುವ ಕೊನೆಯ ದಿನ: 30–10–2014 ಶೈಕ್ಷಣಿಕ ವಿದ್ಯಾರ್ಹತೆ: ಅರ್ಹ ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಎಐಸಿಟಿಇ ಅನುಮೋದಿತ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳು/ಡಿಪ್ಲೊಮಾ ಮತ್ತು ಸ್ನಾತಕ ಪದವಿ ಮಟ್ಟದ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರಬೇಕು. ವೇತನ ಮತ್ತು ಅವಧಿ ದೇಶದಾದ್ಯಂತ ಒಟ್ಟು 4000 ಸ್ಕಾಲರ್‌ಶಿಪ್‌ಗಳು ಲಭ್ಯ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಅವರ ಕೋರ್ಸ್‌ ಮುಕ್ತಾಯವಾಗುವವರೆಗೂ ವಿದ್ಯಾರ್ಥಿ ವೇತನ ನೀಡಲಾಗುವುದು. ಒಂದು ವರ್ಷಕ್ಕೆ ಬೋಧನಾ ಶುಲ್ಕ ಸೇರಿದಂತೆ 30.000 ರೂಪಾಯಿಗಳ ಭತ್ಯೆ ನೀಡಲಾಗುವುದು. ಸಂಭಾವ್ಯ ಭತ್ಯೆಯಾಗಿ ಪ್ರತಿ ತಿಂಗಳು 2000 ರೂಪಾಯಿಗಳನ್ನು ನೀಡಲಾಗುತ್ತದೆ. ಇದನ್ನು ವರ್ಷದಲ್ಲಿ 10 ತಿಂಗಳವರೆಗೆ ಮಾತ್ರ ನೀಡಲಾಗುವುದು. ಆಯ್ಕೆ ವಿಧಾನ: ಮೆರಿಟ್‌ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಅಂಕಗಳನ್ನು ಪರಿಗಣಿಸಲಾಗುವುದು. ಆದಾಗ್ಯೂ ಪ್ರಾದೇಶಿಕ, ಸಮುದಾಯ ಮತ್ತು ಸರ್ಕಾರದ ಮೀಸಲಾತಿ ಅನುಸಾರವಾಗಿಯೂ ವಿದ್ಯಾರ್ಥಿವೇತನ ನೀಡಲಾಗುವುದು. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ಆಯ್ಕೆಯ ಅಂತಿಮ ನಿರ್ಣಯವನ್ನು ಕೈಗೊಳ್ಳಲಿದೆ. ಅರ್ಜಿ ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆ ಮುಖಾಂತರವೇ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು .-./. ಈ ವೆಬ್‌ಸೈಟ್‌ ಮುಖಾಂತರ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಎಲ್ಲಾ ರೀತಿಯಿಂದಲೂ ಕ್ರಮವಾಗಿ ಭರ್ತಿ ಮಾಡಿದ ಫಾರಂ ಜೊತೆಗೆ ಪಿಡಿಎಫ್‌ ರೂಪದಲ್ಲಿನ ಪ್ರಮಾಣ ಪತ್ರಗಳನ್ನು ಸ್ಕ್ಯಾನ್‌ ಮಾಡಿದ ದೃಢೀಕೃತ ಪ್ರತಿಗಳನ್ನು .-.@. ಇಲ್ಲಿಗೆ ಮೇಲ್‌ ಮಾಡಬೇಕು. ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಸಲ್ಲಿಸುವುದು. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಅಂಕಪಟ್ಟಿ, 2013–14ನೇ ಸಾಲಿನ ಆದಾಯ ಪ್ರಮಾಣ ಪತ್ರ, ಕಾಲೇಜಿಗೆ ದಾಖಲಾಗಿರುವ ಬಗ್ಗೆ ಪ್ರಾಂಶುಪಾಲರಿಂದ ಪಡೆದ ದಾಖಲಾತಿ ಪತ್ರ, ಬ್ಯಾಂಕ್‌ ಪಾಸ್‌ಬುಕ್‌, ಬೋಧನಾ ಶುಲ್ಕದ ರಶೀದಿ, ವಿದ್ಯಾರ್ಥಿ ಪಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ನ ಜೆರಾಕ್ಸ್‌ ಪ್ರತಿಗಳನ್ನು ಸಲ್ಲಿಸಬೇಕು. ನಿಗದಿತ ನಮೂನೆ ಮೂಲಕವೇ ಅರ್ಜಿ ಸಲ್ಲಿಸಬೇಕು. ಇತರೆ ವಿಧಾನ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಗಳನ್ನು 30ನೇ ಅಕ್ಟೋಬರ್‌ 2014ರ ಒಳಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ವಿಳಾಸ: ‘ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, 7ನೇ ಮಹಡಿ ಚಂದರ್‌ಲೋಕ್‌ ಬಿಲ್ಡಿಂಗ್‌, ಜನಪಥ್‌, ನವದೆಹಲಿ–110001’ 011–23724150–55 ದೂರವಾಣಿ ಮೂಲಕ ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ವೆಬ್‌ಸೈಟ್‌ ವಿಳಾಸ: .-. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.