2023 ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತ, ಬೌಲಿಂಗ್ ಆಯ್ಕೆ ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 19ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಈಡನ್ ಗಾರ್ಡನ್ಸ್‌‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಕೋಲ್ಕತ್ತ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟೂರ್ನಿಯ ಮೊದಲ ಪಂದ್ಯವನ್ನು ಸೋತಿದ್ದ ನಿತೀಶ್‌ ರಾಣಾ ಬಳಗ, ಇಬ್ಬರು ‘ಹೀರೊ’ಗಳ ನೆರವಿನಿಂದ ಬಳಿಕದ ಎರಡು ಪಂದ್ಯಗಳನ್ನು ಗೆದ್ದಿದೆ. ಇದೀಗ ಇಂದಿನ ಪಂದ್ಯದಲ್ಲಿ ಹ್ಯಾಟ್ರಿಕ್ ಜಯದತ್ತ ಕೆಕೆಆರ್‌ ಚಿತ್ತ ನೆಟ್ಟಿದೆ. ಮತ್ತೊಂದೆಡೆ ಏಡನ್‌ ಮರ್ಕರಂ ನಾಯಕತ್ವದ ಸನ್‌ರೈಸರ್ಸ್‌, ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಮೊದಲ ಎರಡು ಪಂದ್ಯಗಳನ್ನು ಸೋತಿದ್ದ ಈ ತಂಡ, ಕಳೆದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಣಿಸಿತ್ತು. ತಂಡಗಳು ಇಂತಿವೆ: ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಲಾಕಿ ಫರ್ಗುಸನ್, ಸುಯೇಶ್ ಶರ್ಮಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಎನ್. ಜಗದೀಶನ್ ಸನ್‌ರೈಸರ್ಸ್ ಹೈದರಾಬಾದ್ ತಂಡ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್ 🚨 🚨@ @. ▶️ ://./odv5HZvk4p# | # ../77S1a7knB9 ! # ? ▶️ ://./odv5HZvk4p# ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.