–2023 : ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಬೌಲಿಂಗ್‌ ಆಯ್ಕೆ ಮೊಹಾಲಿ: ಐಪಿಎಲ್‌ ಟೂರ್ನಿಯ ಇಂದಿನ (ಗುರುವಾರ) ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದಿರುವ ಗುಜರಾತ್‌ ಟೈಟನ್ಸ್‌ ಬೌಲಿಂಗ್‌ ಆಯ್ದುಕೊಂಡಿದೆ. ಪಂಜಾಬ್‌ ಕಿಂಗ್ಸ್‌ ತಂಡ ಮೊದಲು ಬ್ಯಾಟ್‌ ಮಾಡಲಿದೆ. 🚨 🚨@gujarat_titans @. ▶️ ://./qDQuP8ecgd # | # ../jM5STYICl6 ರಿಂಕು ಸಿಂಗ್‌ ಕೊನೆಯ ಓವರ್‌ನಲ್ಲಿ ಕೊಟ್ಟಿದ್ದ ಬಲವಾದ ಪೆಟ್ಟನ್ನು ಮರೆಯುವ ಪ್ರಯತ್ನದಲ್ಲಿರುವ ಗುಜರಾತ್‌ ಟೈಟನ್ಸ್‌ ತಂಡ, ಹಾರ್ದಿಕ್‌ ಪಾಂಡ್ಯ ನೇತೃತ್ವದ ಟೈಟನ್ಸ್‌ ತಂಡಕ್ಕೆ ಕಳೆದ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್‌ ಕೈಯಲ್ಲಿ ಅನಿರೀಕ್ಷಿತ ಸೋಲು ಎದುರಾಗಿತ್ತು. ಸತತ ಐದು ಸಿಕ್ಸರ್‌ಗಳನ್ನು ಸಿಡಿಸಿದ್ದ ಕೆಕೆಆರ್‌ ತಂಡದ ರಿಂಕು, ಟೈಟನ್ಸ್‌ ತಂಡದ ಕೈಯಿಂದ ಗೆಲುವನ್ನು ಕಿತ್ತುಕೊಂಡಿದ್ದರು. ನಾಯಕ ಹಾರ್ದಿಕ್‌ ವಾಪಸಾಗಿರುವುದು ತಂಡದ ಬಲ ಹೆಚ್ಚಿಸಿದೆ. ಅನಾರೋಗ್ಯದ ಕಾರಣ ಅವರು ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ತಂಡವನ್ನು ರಶೀದ್‌ ಖಾನ್‌ ಮುನ್ನಡೆಸಿದ್ದರು. ಹಾಲಿ ಚಾಂಪಿಯನ್ನರು ಮೂರು ಪಂದ್ಯಗಳಿಂದ ನಾಲ್ಕು ಪಾಯಿಂಟ್ಸ್‌ ಹೊಂದಿದ್ದಾರೆ. ಪಂಜಾಬ್‌ ಕಿಂಗ್ಸ್‌ ತಂಡ ಮೂರು ಪಂದ್ಯಗಳನ್ನು ಆಡಿದ್ದು, ನಾಲ್ಕು ಪಾಯಿಂಟ್ಸ್‌ ಹೊಂದಿದೆ. ಪಂಜಾಬ್‌ ಕಿಂಗ್ಸ್‌ ತಂಡ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು 8 ವಿಕೆಟ್‌ಗಳಿಂದ ಸೋತಿತ್ತು. ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.