2023: ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ 286ಕ್ಕೆ ಆಲೌಟ್ ಹೈದಾರಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 49 ಓವರ್‌ಗಳಲ್ಲಿ 286 ರನ್‌ಗಳಿಗೆ ಆಲೌಟ್ ಆಗಿದೆ. ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಪರ ಮೊಹಮ್ಮದ್ ರಿಜ್ವಾನ್ ಹಾಗೂ ಸೌದ್ ಶಕೀಲ್ ಅರ್ಧಶತಕ ಸಾಧನೆ ಮಾಡಿದರು. ರಿಜ್ವಾನ್ 75 ಎಸೆತಗಳಲ್ಲಿ 68 ಮತ್ತು ಶಕೀಲ್ 52 ಎಸೆತಗಳಲ್ಲಿ ಅಷ್ಟೇ ರನ್ ಗಳಿಸಿದರು. ಫಖಾರ್ ಜಮಾನ್ (12), ಇಮಾಮ್ ಉಲ್ ಹಕ್ (15) ಹಾಗೂ ನಾಯಕ ಬಾಬರ್ ಆಜಂ (5) ನಿರಾಸೆ ಮೂಡಿಸಿದರು. ಇದರಿಂದಾಗಿ ಪಾಕಿಸ್ತಾನ 38ಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಗೂಡಿದ ರಿಜ್ವಾನ್ ಹಾಗೂ ಶಕೀಲ್ ನಾಲ್ಕನೇ ವಿಕೆಟ್‌ಗೆ 120 ರನ್‌ಗಳ ಜೊತೆಯಾಟ ಕಟ್ಟಿದರು. ಕೊನೆಯ ಹಂತದಲ್ಲಿ ಮೊಹಮ್ಮದ್ ನವಾಜ್ (39)ಹಾಗೂ ಶದಾಬ್ ಖಾನ್ (32) ಉಪಯುಕ್ತ ಇನಿಂಗ್ಸ್ ಕಟ್ಟುವ ಮೂಲಕ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ನೆದರ್ಲೆಂಡ್ಸ್ ಪರ ಬಾಸ್ ಡಿ ಲೀಡ್ ನಾಲ್ಕು ಮತ್ತು ಕಾಲಿ ಎಕರ್ಮನ್ ಎರಡು ವಿಕೆಟ್ ಗಳಿಸಿ ಮಿಂಚಿದರು. - #CWC23 👊# 📝: ://./ ../ngl20b2dJU ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.