2023 : ಟಾಸ್‌ ಗೆದ್ದ ಸನ್‌ರೈಸರ್ಸ್‌ ಬೌಲಿಂಗ್‌ ಆಯ್ಕೆ ಹೈದರಾಬಾದ್‌: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 14ನೇ ಪಂದ್ಯದಲ್ಲಿ ಭಾನುವಾರ ಪಂಜಾಬ್‌ ಕಿಂಗ್ಸ್‌ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋತಿರುವ ಸನ್‌ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಾದರೂ ಗೆಲ್ಲುವ ತವಕದಲ್ಲಿದೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಪಂಜಾಬ್‌ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಹೈದರಾಬಾದ್‌ ತಂಡದ ಪ್ರಮುಖ ಬ್ಯಾಟರ್‌ಗಳಾದ ಮಯಂಕ್ ಅಗರವಾಲ್, ಅಭಿಷೇಕ್ ಶರ್ಮಾ, ಹ್ಯಾರಿ ಬ್ರೂಕ್ ಹಾಗೂ ರಾಹುಲ್ ತ್ರಿಪಾಠಿ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ದೊಡ್ಡ ಮೊತ್ತ ಪೇರಿಸುವುದು ಸಾಧ್ಯವಾಗಲಿದೆ. ಪಂಜಾಬ್ ತಂಡದ ಆರಂಭಿಕ ಜೋಡಿ ಶಿಖರ್ ಹಾಗೂ ಪ್ರಭಸಿಮ್ರನ್ ಸಿಂಗ್ ಉತ್ತಮ ಲಯದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಇಬ್ಬರೂ ಅರ್ಧಶತಕ ಗಳಿಸಿದ್ದರು. ಆದರೆ, ರಾಜಪಕ್ಸ ಮತ್ತು ದೇಶಿ ಕ್ರಿಕೆಟ್‌ನ ಸ್ಪೋಟಕ ಶೈಲಿಯ ಬ್ಯಾಟರ್ ಶಾರೂಕ್ ಖಾನ್ ಅವರ ಅಸ್ಥಿರ ಲಯವು ತಂಡದ ಚಿಂತೆಗೆ ಕಾರಣವಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.