2023: ಕೋಲ್ಕತ್ತ ವಿರುದ್ಧ ಟಾಸ್‌ ಗೆದ್ದ ಗುಜರಾತ್, ಬ್ಯಾಟಿಂಗ್ ಆಯ್ಕೆ ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 13ನೇ ಪಂದ್ಯದಲ್ಲಿ ಇಂದು ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತ ವಿರುದ್ಧ ಟಾಸ್‌ ಗೆದ್ದಿರುವ ಗುಜರಾತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವು ‘ಹ್ಯಾಟ್ರಿಕ್ ವಿಜಯ’ದ ಮೇಲೆ ಕಣ್ಣಿಟ್ಟಿದೆ. 🚨 🚨@gujarat_titans @. ▶️ ://./G8bESXjTyh# | # ../ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ ಹುರುಪಿನಲ್ಲಿರುವ ಕೋಲ್ಕತ್ತ ತಂಡವು ಮತ್ತೊಂದು ಜಯದ ಕನಸಿನಲ್ಲಿದೆ. ಆಲ್‌ರೌಂಡರ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಯುವ ಆಟಗಾರ ಸಾಯಿ ಸುದರ್ಶನ್, ಶುಭಮನ್ ಗಿಲ್ ಮತ್ತು ಡೇವಿಡ್ ಮಿಲ್ಲರ್ ತಂಡದ ಬ್ಯಾಟಿಂಗ್ ವಿಭಾಗದ ಪ್ರಮುಖರಾಗಿದ್ದಾರೆ. ಗುಜರಾತ್‌ ತಂಡ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ದೆಹಲಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಗಳಿಸಿತ್ತು. ಇದರಿಂದಾಗಿ ತಂಡವು ಅಪಾರ ಆತ್ಮವಿಶ್ವಾಸದಲ್ಲಿದೆ. ಕೋಲ್ಕತ್ತ ತಂಡವು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಎರಡನೇಯದ್ದರಲ್ಲಿ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ಆರ್‌ಸಿಬಿ ಎದುರಿನ ಪಂದ್ಯ ಗೆದ್ದಿತ್ತು. ನವಪ್ರತಿಭೆ ಸುಯಶ್ ಶರ್ಮಾ ಹಾಗೂ ವರುಣ್ ಚಕ್ರವರ್ತಿಯವರ ಅಮೋಘ ಬೌಲಿಂಗ್‌ ಕೂಡ ಗಮನ ಸೆಳೆದಿತ್ತು. ಆದರೆ ಗುಜರಾತ್ ತಂಡದ ಯೋಜನಾಬದ್ಧ ಆಟಕ್ಕೆ ಕಡಿವಾಣ ಹಾಕಲು ಕೋಲ್ಕತ್ತ ಬಳಗವು ವಿಭಿನ್ನ ಯೋಜನೆಯೊಂದಿಗೆ ಕಣಕ್ಕಿಳಿಯುವ ಅನಿವಾರ್ಯತೆ ಇದೆ. ಅದರಲ್ಲೂ ಉತ್ತಮ ಫಾರ್ಮ್‌ನಲ್ಲಿರುವ ಶುಭಮನ್ ಗಿಲ್ ಅವರನ್ನು ಕಟ್ಟಿಹಾಕುವುದು ಅನುಭವಿ ವೇಗಿ ಮೊಹಮ್ಮದ್ ಶಮಿ ಹಾಗೂ ಅಲ್ಜರಿ ಜೋಸೆಫ್ ಅವರ ಮುಂದಿರುವ ಪ್ರಮುಖ ಸವಾಲು. ತಂಡಗಳು ಇಂತಿವೆ ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ಮಂದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಎನ್. ಜಗದೀಶನ್ ಗುಜರಾತ್ ಟೈಟಾನ್ಸ್: ರಶೀದ್ ಖಾನ್ (ನಾಯಕ) ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಜೋಸ್ ಲಿಟಲ್, ಯಶ್ ದಯಾಳ್, ಮೊಹಮ್ಮದ್ ಶಮಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.