– 2023 | ಡೆಲ್ಲಿಗೆ 194ರನ್‌ಗಳ ಗುರಿ ನೀಡಿದ ಲಖನೌ ಲಖನೌ: ಇಂಡಿಯನ್‌ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 16ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 193ರನ್‌ಗಳ ಸವಾಲಿನ ಮೊತ್ತ ಗಳಿಸಿದೆ. ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಟಾಸ್‌ ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಬ್ಯಾಟಿಂಗ್‌ ಮಾಡಲು ಕಣಕ್ಕೆ ಇಳಿದ ಲಖನೌ ತಂಡಕ್ಕೆ ನಾಯಕ ಕೆ.ಎಲ್‌ ರಾಹುಲ್‌ (8) ಅವರ ವಿಕೆಟ್‌ ಪತನದೊಂದಿಗೆ ಆರಂಭಿಕ ಆಘಾತ ಎದುರಾಗಿತ್ತು. ಆದರೆ, 38 ಎಸೆತಗಳಿಂದ ಎದುರಿಸಿ 73ರನ್‌ ಗಳಿಸಿ ಕೇಲ್‌ ಮೇಯರ್ಸ್‌ ತಂಡಕ್ಕೆ ಆಸರೆಯಾದರು. ಇನ್ನೊಂದೆಡೆ ನಿಕೊಲಸ್‌ ಪೂರನ್‌ 36 ರನ್‌ ಗಳಿಸಿ ತಂಡಕ್ಕೆ ನೆರವಾದರು. ಕಡೇ ಹಂತದಲ್ಲಿ ಮಿಂಚಿನಾಟ ಪ್ರದರ್ಶಿಸಿದ ಆಯುಷ್‌ ಬದೋನಿ, 7 ಎಸೆತಗಳಿಂದ 18ರನ್‌ ಗಳಿಸಿ ತಂಡದ ಮೊತ್ತ ಹೆಚ್ಚಾಗಲು ಕಾಣಿಕೆ ನೀಡಿದರು. ಅಂತಿಮವಾಗಿ ಲಖನೌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟದೊಂದಿಗೆ 193ರನ್‌ ಗಳಿಸಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.