'ನಾಟು ನಾಟು' ಮೋಡಿ: ಸಖತ್ ಸ್ಟೆಪ್ಸ್ ಹಾಕಿದ ವಿರಾಟ್ ಕೊಹ್ಲಿ ಮುಂಬೈ: ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಗೆ ಪಾತ್ರವಾಗಿರುವ 'ನಾಟು ನಾಟು' ಹಾಡಿಗೆ ಹೆಜ್ಜೆ ಹಾಕುವ ಮೂಲಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ. ವಾಂಖೆಡೆ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಇನಿಂಗ್ಸ್ ನಡುವೆ ನಾಟು ನಾಟು ಹಾಡಿಗೆ ವಿರಾಟ್ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಇದನ್ನೂ ಓದಿ: : ಕೊನೆಗೂ ಮಿಂಚಿದ ಕನ್ನಡಿಗ ರಾಹುಲ್: ಭಾರತಕ್ಕೆ ಗೆಲುವು ಈ ವಿಡಿಯೊವನ್ನು ಆರ್‌ಆರ್‌ಆರ್ ಚಿತ್ರತಂಡವು ಹಂಚಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. .@ 🕺🕺 # 🤩 ../6jjZhH7fh2 ಎಸ್.ಎಸ್‌.ರಾಜಮೌಳಿ ನಿರ್ದೇಶನದ ತೆಲುಗಿನ ಆರ್‌ಆರ್‌ಆರ್‌ ಚಿತ್ರದ 'ನಾಟು ನಾಟು' ಗೀತೆ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಜಯಿಸಿದೆ. ಅತ್ಯುತ್ತಮ ಮೂಲಗೀತೆ (ಒರಿಜಿನಲ್‌) ವರ್ಗದಲ್ಲಿ ಆಸ್ಕರ್ ಪ್ರಶಸ್ತಿ ಒಲಿದು ಬಂದಿದೆ. ಇದಕ್ಕೂ ಮೊದಲು ನಾಟು ನಾಟು ಗೀತೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿಕೊಂಡಿತ್ತು. ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ಹೆಜ್ಜೆ ಹಾಕಿದ್ದ ಆರ್‌ಆರ್‌ಆರ್‌ ಚಿತ್ರದ 'ನಾಟು ನಾಟು' ಹಾಡು ಈಗಾಗಲೇ ಜನತ್ತಿನಾದ್ಯಂತ ಸಂಚಲನ ಸೃಷ್ಟಿಸಿದೆ. ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ನಾಟು ನಾಟು ಹಾಡಿಗೆ ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗಂಜ್ ಕಂಠ ನೀಡಿದ್ದಾರೆ. # 🕺🕺🕺 # # # # # @ @ImRo45 @ @tarak9999 ../2bm6FL6iAT , ' ' , .# # # # # # #oscars2023 # # # # ../kgG3Ga8vyc ' ' ' 1st @ # # # # ../oCxGRLvfF9 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.