ಟೆಸ್ಟ್ ರ‍್ಯಾಂಕಿಂಗ್‌: ಅಗ್ರಸ್ಥಾನಕ್ಕೆ ಮರಳಿದ ಅಶ್ವಿನ್‌ ದುಬೈ: ಭಾರತದ ಅನುಭವಿ ಸ್ಪಿನ್ನರ್ ಆರ್‌. ಅಶ್ವಿನ್ ಅವರು ಐಸಿಸಿ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಬುಧವಾರ ಅಗ್ರಸ್ಥಾನಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ಎದುರಿನ ನಾಲ್ಕನೇ ಟೆಸ್ಟ್‌ನಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದು ಅವರ ಕ್ರಮಾಂಕ ಏರಿಕೆಗೆ ಕಾರಣವಾಗಿದೆ. ಅಹಮದಾಬಾದ್‌ನಲ್ಲಿ ನಡೆದ ಟೆಸ್ಟ್ ಡ್ರಾದಲ್ಲಿ ಕೊನೆಗೊಂಡಿತ್ತು. ಅಶ್ವಿನ್‌ ಈ ಪಂದ್ಯದಲ್ಲಿ 91 ರನ್‌ ನೀಡಿ ಆರು ವಿಕೆಟ್‌ ಗಳಿಸಿದ್ದರು. ಇದರೊಂದಿಗೆ ಬಾರ್ಡರ್‌–ಗಾವಸ್ಕರ್ ಸರಣಿಯಲ್ಲಿ ಗರಿಷ್ಠ ವಿಕೆಟ್‌ (ಒಟ್ಟು 25) ಗಳಿಸಿದ ಬೌಲರ್ ಎನಿಸಿಕೊಂಡಿದ್ದರು. ಸದ್ಯ ಅಶ್ವಿನ್‌, ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಭಾರತದ ಅಕ್ಷರ್ ಪಟೇಲ್ ಅವರು ಆರು ಸ್ಥಾನಗಳ ಬಡ್ತಿ ಪಡೆದು, 28ನೇ ಸ್ಥಾನದಲ್ಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.