ನಾಲ್ಕನೇ ಟೆಸ್ಟ್‌: ಶಮಿ ಆಡುವ ಸಾಧ್ಯತೆ ನವದೆಹಲಿ (ಪಿಟಿಐ): ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್‌ ಕ್ರಿಕೆಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ‘ಕಾರ್ಯಭಾರ ನಿರ್ವಹಣೆ’ಯ ಭಾಗವಾಗಿ ಶಮಿ ಅವರಿಗೆ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ವಿಶ್ರಾಂತಿ ನೀಡಲಾಗಿತ್ತು. ಅವರ ಬದಲು ಉಮೇಶ್‌ ಯಾದವ್‌ ಆಡಿದ್ದರು. ನಾಲ್ಕನೇ ಟೆಸ್ಟ್‌ ‍ಪಂದ್ಯ ಅಹಮದಾಬಾದ್‌ನಲ್ಲಿ ಮಾರ್ಚ್‌ 9 ರಂದು ಆರಂಭವಾಗಲಿದೆ. ಇನ್ನೊಬ್ಬ ವೇಗಿ ಮೊಹಮ್ಮದ್‌ ಸಿರಾಜ್‌ ಅವರಿಗೆ ಈ ಪಂದ್ಯದಲ್ಲಿ ವಿಶ್ರಾಂತಿ ಲಭಿಸುವ ನಿರೀಕ್ಷೆಯಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಬೇಕಾದರೆ ಭಾರತ ತಂಡಕ್ಕೆ ಕೊನೆಯ ಟೆಸ್ಟ್‌ನಲ್ಲಿ ಗೆಲುವು ಪಡೆಯುವುದು ಅನಿವಾರ್ಯ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.