: ಖ್ವಾಜಾ ಅರ್ಧಶತಕ; ಆಸ್ಟ್ರೇಲಿಯಾಗೆ ಇನಿಂಗ್ಸ್ ಮುನ್ನಡೆ ಇಂದೋರ್: ಎಡಗೈ ಆರಂಭಿಕ ಬ್ಯಾಟರ್ ಉಸ್ಮಾನ್ ಖ್ವಾಜಾ ಆಕರ್ಷಕ ಅರ್ಧಶತಕದ ಬೆಂಬಲದಿಂದ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಇನಿಂಗ್ಸ್ ಮುನ್ನಡೆ ಗಳಿಸಿದೆ. ಮೊದಲ ದಿನದಾಟದಲ್ಲೇ ಮ್ಯಾಥ್ಯೂ ಕುನೇಮನ್ (16ಕ್ಕೆ 5 ವಿಕೆಟ್) ಸ್ಪಿನ್ ಮೋಡಿಗೆ ಸಿಲುಕಿದ ಭಾರತ ಕೇವಲ 109 ರನ್ನಿಗೆ ಆಲೌಟ್ ಆಯಿತು. ಇದನ್ನೂ ಓದಿ: : ಆ್ಯಂಡರ್ಸನ್ ಹಿಂದಿಕ್ಕಿದ ಅಶ್ವಿನ್ ನಂ.1 ಬಳಿಕ ಬ್ಯಾಟಿಂಗ್ ನಡೆಸಿದ ಆಸೀಸ್‌ಗೆ ಆರಂಭದಲ್ಲೇ ಟ್ರಾವಿಸ್ ಹೆಡ್ (9) ವಿಕೆಟ್ ನಷ್ಟವಾಯಿತು. ಈ ನಡುವೆ ಮಾರ್ನಸ್ ಲಾಬುಷೇನ್ (31) ಜೊತೆ ದ್ವಿತೀಯ ವಿಕೆಟ್‌ಗೆ 96 ರನ್‌ಗಳ ಮಹತ್ವದ ಜೊತೆಯಾಟದಲ್ಲಿ ಭಾಗಿಯಾದ ಖ್ವಾಜಾ ತಂಡವನ್ನು ಅಪಾಯದಿಂದ ಪಾರು ಮಾಡಿದರು. ಖ್ವಾಜಾ ಅವರಿಗೆ ನಾಯಕ ಸ್ಟೀವನ್ ಸ್ಮಿತ್ ಸಾಥ್ ನೀಡುತ್ತಿದ್ದಾರೆ. ಭಾರತದ ಪರ ಜಡೇಜ ಎರಡು ವಿಕೆಟ್ ಕಬಳಿಸಿದರು. 50!# ಈ ಮೊದಲು ಟಾಸ್ ಗೆದ್ದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಾಯಕ ರೋಹಿತ್ ಶರ್ಮಾ (12) ಸ್ಟಂಪ್ ಔಟ್ ಆದರು. ಕೆ.ಎಲ್. ರಾಹುಲ್ ಸ್ಥಾನಕ್ಕೆ ಆಯ್ಕೆಯಾಗಿದ್ದ ಶುಭಮನ್ ಗಿಲ್ (21) ಸಹ ನಿರಾಸೆ ಮೂಡಿಸಿದರು. ಚೇತೇಶ್ವರ ಪೂಜಾರ (1), ರವೀಂದ್ರ ಜಡೇಜ (4) ಹಾಗೂ ಶ್ರೇಯಸ್ ಅಯ್ಯರ್ (0) ಎರಡಂಕಿಯನ್ನು ದಾಟಲಿಲ್ಲ. ಪರಿಣಾಮ 45 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತು. ಈ ವೇಳೆ ನಿರೀಕ್ಷೆ ಮೂಡಿಸಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ (22) ಸಹ ಔಟ್ ಆಗುವುದರೊಂದಿಗೆ ಭಾರತಕ್ಕೆ ಬಲವಾದ ಹೊಡೆತ ಬಿತ್ತು. ಊಟದ ವಿರಾಮಕ್ಕೂ ಸ್ವಲ್ಪ ಮೊದಲು ಶ್ರೀಕರ್ ಭರತ್ (17) ಸಹ ಪೆವಿಲಿಯನ್ ಸೇರಿದರು. ಈ ವೇಳೆ ಭಾರತ ಏಳು ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿತ್ತು. ಇದಾದ ಬಳಿಕವೂ ಭಾರತ ಚೇತರಿಸಿಕೊಳ್ಳಲಿಲ್ಲ. ಅಕ್ಷರ್ ಪಟೇಲ್ 12 ರನ್ ಗಳಿಸಿ ಔಟಾಗದೆ ಉಳಿದರು. ರವಿಚಂದ್ರನ್ ಅಶ್ವಿನ್ (3), ಉಮೇಶ್ ಯಾದವ್ (17) ಹಾಗೂ ಮೊಹಮ್ಮದ್ ಸಿರಾಜ್ (0) ನಿರಾಸೆ ಮೂಡಿಸಿದರು. ಆಸೀಸ್ ಪರ ಕುನೇಮನ್ 16 ರನ್ ತೆತ್ತು ಐದು ವಿಕೆಟ್ ಕಬಳಿಸಿದರು. ನೇಥನ್ ಲಯನ್ ಮೂರು ಮತ್ತು ಟಾಡ್ ಮರ್ಫಿ ಒಂದು ವಿಕೆಟ್ ಗಳಿಸಿದರು. - - ! 👏# ../lmC6KTgOFD ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.