3rd : ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ ಇಂದೋರ್: ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಟಾಸ್‌ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಭಾರತ ತಂಡ ಆರಂಭಿಕ ಆಘಾತ ಅನುಭವಿಸಿದ್ದು ಕೇವಲ 8 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್‌ ಶರ್ಮಾ, ಶುಭುಮನ್‌ ಗಿಲ್‌ ಹಾಗೂ ಚೇತೇಶ್ವರ್ ಪೂಜಾರ ಔಟ್‌ ಆಗಿದ್ದಾರೆ. 3RD . ! 8.2: 1(4) , 36/3 ://./ # @ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿರುವ ಭಾರತ ಕ್ರಿಕೆಟ್‌ ತಂಡ ಅಪಾರ ಆತ್ಮವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳನ್ನು ಭಾರತ ತಂಡ ಗೆದ್ದಿದೆ. ತಂಡಗಳು: ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಅಲೆಕ್ಸ್ ಕ್ಯಾರಿ, ಕ್ಯಾಮರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮ್ಯಾಟ್ ಕುನೇಮನ್, ಮಾರ್ನಸ್ ಲಾಬುಷೇನ್, ನೇಥನ್ ಲಯನ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.