ಮಹಿಳಾ ಪ್ರೀಮಿಯರ್‌ ಲೀಗ್‌: ಗುಜರಾತ್‌ ಜೈಂಟ್ಸ್‌ಗೆ ಮೂನಿ ನೇತೃತ್ವ ಮುಂಬೈ (ಪಿಟಿಐ): ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಬೆಥ್‌ ಮೂನಿ ಅವರು ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಗುಜರಾತ್‌ ಜೈಂಟ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತದ ಆಲ್‌ರೌಂಡರ್‌ ಸ್ನೇಹಾ ರಾಣಾ ಅವರು ಉಪನಾಯಕಿಯ ಜವಾಬ್ದಾರಿ ನಿಭಾಯಿಸಲಿದ್ದಾರೆ. ಚೊಚ್ಚಲ ಡಬ್ಲ್ಯುಪಿಎಲ್ ಟೂರ್ನಿ ಮಾರ್ಚ್‌ 4 ರಿಂದ ನಡೆಯಲಿದೆ. ಭಾನುವಾರ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ 74 ರನ್‌ ಗಳಿಸಿದ್ದ ಮೂನಿ ಪಂದ್ಯಶ್ರೇಷ್ಠ ಗೌರವ ಪಡೆದುಕೊಂಡಿದ್ದರು. ‘ಚೊಚ್ಚಲ ಡಬ್ಲ್ಯುಪಿಎಲ್‌ ಟೂರ್ನಿಯಲ್ಲಿ ಗುಜರಾತ್‌ ಜೈಂಟ್ಸ್‌ ತಂಡವನ್ನು ಮುನ್ನಡೆಸುವ ಅವಕಾಶ ನನಗೆ ಲಭಿಸಿರುವುದು ಸಂತಸ ಉಂಟುಮಾಡಿದೆ’ ಎಂದು ಮೂನಿ ಪ್ರತಿಕ್ರಿಯಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.