ಪೃಥ್ವಿ ಶಾ ಕಾರಿನ ಮೇಲೆ ದಾಳಿ: ನಟಿ ಸಪ್ನಾ ಗಿಲ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ ಮುಂಬೈ: ಭಾರತದ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ ಹಾಗೂ ಅವರ ಕಾರಿನ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೋಜಪುರಿ ನಟಿ ಸಪ್ನಾ ಗಿಲ್‌ ಹಾಗೂ ಇತರ ಮೂವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಾಥಮಿಕ ವಿಚಾರಣೆ ಸಲುವಾಗಿ ಪೊಲೀಸರ ವಶದಲ್ಲಿದ್ದ ಗಿಲ್‌ ಹಾಗೂ ಇತರರನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಎದುರು ಇಂದು (ಸೋಮವಾರ) ಹಾಜರಿಪಡಿಸಲಾಯಿತು. ಕೃತ್ಯಕ್ಕೆ ಬಳಸಿದ್ದ ಬೇಸ್‌ಬಾಲ್‌ ಬ್ಯಾಟ್‌ ಹಾಗೂ ವಾಹನವನ್ನು ವಶಕ್ಕೆ ಪಡೆಯುವ ಸಲುವಾಗಿ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ವಿಚಾರಣೆ ವೇಳೆ ಪೊಲೀಸರು ಮನವಿ ಮಾಡಿದ್ದರು. ಈ ಮನವಿಯನ್ನು ಕೋರ್ಟ್‌ ನಿರಾಕರಿಸಿದೆ. ಇವನ್ನೂ ಓದಿ * ಸೆಲ್ಫಿ ನಿರಾಕರಿಸಿದ ಪೃಥ್ವಿ ಶಾ ಕಾರಿನ ಮೇಲೆ ದಾಳಿ; ಎಫ್‌ಐಆರ್ ದಾಖಲು * ಕ್ರಿಕೆಟಿಗ ಪೃಥ್ವಿ ಶಾ ಜೊತೆ ಕಿರಿಕ್ ಮಾಡಿಕೊಂಡ ಆ ಸುಂದರಿ ಯಾರು? ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.